ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ ಈ ಕುರಿತ ಸಂಪೂರ್ಣ ವಿವರ ನಿಮಗಾಗಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಮ್ ಆಫೀಸರ್) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
* ಈ ಹುದ್ದೆಗಳನ್ನು ದೇಶದಲ್ಲಿಯೇ ವಿಶೇಷವಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮೊದಲ ಬಾರಿಗೆ ಸೃಜಿಸಿ ಅಧಿಸೂಚನೆ ಹೊರಡಿಸಿರುವುದು ವಿಶೇಷವಾಗಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 17 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 18 ಜನವರಿ 2022
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಪದವಿ ಅಥವಾ ವಿಜ್ಞಾನ ವಿಷಯದಲ್ಲಿ ಪದವಿ ಜೊತೆಗೆ ವಿಧಿವಿಜ್ಞಾನ ವಿಷಯದಲ್ಲಿ 1ವರ್ಷದ ಡಿಪ್ಲೊಮಾ ಕೋರ್ಸ್ ಹೊಂದಿರತಕ್ಕದ್ದು.
- ವಿದ್ಯಾರ್ಹತೆಯ ಕುರಿತ ಹೆಚ್ಚಿನ ವಿವರಗಳಿಗೆ ಅಧಿಸೂಚನೆಯನ್ನು ಗಮನಿಸುವುದು.
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 35 ವರ್ಷ
ಹಿಂದುಳಿದ ವರ್ಗ 38 ವರ್ಷ
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿ ಗಳನ್ನು ಮೀರಿರಬಾರದು.

Comments