ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ04/03/2022 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ: 01
- ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) - 01
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ, ಬೆಂಗಳೂರು - 27
ಅಭ್ಯರ್ಥಿಗಳನ್ನೂ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ ರೂ. 200/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 8,093/- ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments