ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ವಿಜಯಪುರ (KSWU)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ವಿಭಾಗಗಳಿಗೆ ಹಾಗೂ ಮಂಡ್ಯ ಸಿಂಧನೂರು, ಬೀದರ್ ಮತ್ತು ಉಡುತಡಿ ಕೇಂದ್ರಗಳಿಗೆ ಪೂರ್ಣಕಾಲಿಕ/ ಅರೆಕಾಲಿಕ ಅತಿಥಿ ಉಪನ್ಯಾಸಕರನ್ನು ವಿಷಯಗಳಿಗೆ ಅನುಗುಣವಾಗಿ ನೇರ ಸಂದರ್ಶನಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಈ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/11/2023 ಮತ್ತು 29/11/2023 ರಂದು ಬೆಳಗ್ಗೆ 10.30 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಮೂಲ ದಾಖಲಾತಿಗಳೊಂದಿಗೆ ಸಂದಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ವಿಶ್ವವಿದ್ಯಾಯಲ ಆಡಳಿತ ಭವನದ ಸಿಂಡಿಕೇಟ್ ಸಭಾಭವನ ವಿಜಯಪುರ-586101
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸ್ನಾತಕೋತರ ಪದವಿಯಲ್ಲಿ ಕನಿಷ್ಠ 55% ಅಂಕಗಳನ್ನು ಪಡೆದಿರಬೇಕು. ಹಾಗೂ SLET/ NET/ Ph.D ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments