ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 28/11/2023 ರೊಳಗಾಗಿ ಕರ್ನಾಟಕ ವಿಶ್ವ ವಿದ್ಯಾಲಯ, ಪಾವಟೆನಗರ ಧಾರವಾಡ -580003 ಕ್ಕೆ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 03
ಕರಡು ವಾಚಕರು - 01
ಬಡಿಗ / ಪೇಂಟರ್ - 01
ಎಲೆಕ್ಟ್ರಿಷಿಯನ್ - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು 7 th/ SSLC ಹಾಗೂ ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 700/- ಅರ್ಜಿ ಶುಲ್ಕವನ್ನು ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments