Loading..!

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:27 ನವೆಂಬರ್ 2023
not found

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿನ ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯಡಿ ಕೇಂದ್ರ ಕಚೇರಿ ಬೆಂಗಳೂರು ಹಾಗೂ ಯೋಜನಾ ಅನುಷ್ಠಾನ ಘಟಕ ಹುಬ್ಬಳ್ಳಿ, ಬೆಳಗಾವಿ, ಕಲಬುರ್ಗಿಯಲ್ಲಿ  ಖಾಲಿ ಇರುವ 10 ಎಕ್ಸಿಕ್ಯೂಟಿವ್ ಇಂಜಿನಿಯರ್, ಅಸಿಸ್ಟಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್ ಮತ್ತು ಅಸಿಸ್ಟೆಂಟ್ ಇಂಜಿನಿಯರ್ ಹುದ್ದೆಗಳನ್ನು ಎಚ್.ಆರ್.ಪಾಲಿಸಿ ಅನ್ವಯ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 19 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 10
Executive Engineer : 2
Assistant Executive Engineer : 1
Assistant Engineer (Civil)-Works : 4
Assistant Engineer (Civil)–O&M : 3

No. of posts:  10
Application Start Date:  27 ನವೆಂಬರ್ 2023
Application End Date:  19 ಡಿಸೆಂಬರ್ 2023
Work Location:  ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಮೆರಿಟ್ ಹಾಗೂ ವೃತ್ತಿ ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE (Civil) or Equivalent Degree. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 62 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನೀಡಲಾಗುತ್ತದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
-ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ :

Comments