ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 26 ಫೆಬ್ರುವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 03
ಕಾರ್ಯಪಾಲಕ ಅಭಿಯಂತಕರು - 01
ಉಪ ಪ್ರಧಾನ ವ್ಯವಸ್ಥಾಪಕರು (ಹಣಕಾಸು ಮತ್ತು ಲೆಕ್ಕಪತ್ರ) - 01
ವ್ಯವಸ್ಥಾಪಕರು (ಕಾರ್ಪೊರೇಟ್ ಫೈನಾನ್ಸ್) - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ವಿದ್ಯಾರ್ಹತೆ, ಮೆರಿಟ್ ಹಾಗೂ ವೃತ್ತಿ ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು M.com (Regular)/ ICWA (Inter)/ MBA with Finance/ BE (Civil) or Equivalent Degree. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 70,815/- ರೂ ಗಳಿಂದ 88,640/- ರೂ ಗಳವರೆಗೆ ಮಾಲಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments