ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ 25 ಅಸೋಸಿಯೇಟ್ ಪ್ರೊಫೆಸರ್, ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26 ಮಾರ್ಚ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 25
ಪ್ರೊಫೆಸರ್ ಹುದ್ದೆಗಳು - 05
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು - 05
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳು - 15
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಪಶುಸಂಗೋಪನೆಯಲ್ಲಿ ಸ್ನಾತಕೋತ್ತರ ಪದವಿ/ ಪಿಎಚ್‌ಡಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 1000/- ರೂ ಹಾಗೂ SC/ST ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 35 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST/ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ
OBC ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
ಪ್ರೊಫೆಸರ್ ಹುದ್ದೆಗಳಿಗೆ ಮಾಸಿಕ ವೇತನ 1,44,200/-ರೂ ಗಳಿಂದ 2,18,200/- ರೂ ಗಳ ವರೆಗೆ
ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗಳಿಗೆ ಮಾಸಿಕ ವೇತನ 1,31,400/- ರೂ ಗಳಿಂದ 2,17,100/- ರೂ ಗಳ ವರೆಗೆ ಹಾಗೂ
ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಮಾಸಿಕ ವೇತನ 57,700/- ರೂ ಗಳಿಂದ 1,82,400/- ರೂ ಗಳ ವರೆಗೆ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments