ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದಲ್ಲಿ (KVIC) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Hanamant Katteppanavar | Date:19 ನವೆಂಬರ್ 2020

ಖಾದಿ ಮತ್ತು ಗ್ರಾಮ ಕೈಗಾರಿಕಾ ಆಯೋಗ (ಕೆವಿಐಸಿ) ಯು ಭಾರತ ಸರ್ಕಾರದಿಂದ 1957 ರ ಏಪ್ರಿಲ್ ನಲ್ಲಿ ಸ್ಥಾಪಿಸಲಾದ ಶಾಸನಬದ್ಧ ಸಂಸ್ಥೆಯಾಗಿದ್ದು, ಇದು ಭಾರತದೊಳಗಿನ ಖಾದಿ ಮತ್ತು ಗ್ರಾಮ ಕೈಗಾರಿಕೆಗಳಿಗೆ ಸಂಬಂಧಿಸಿದಂತೆ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವಾಲಯದ ಅಧೀನದಲ್ಲಿರುವ ಒಂದು ಉನ್ನತ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ ಖಾಲಿ ಇರುವ 34 ನಿರ್ದೇಶಕ ಮತ್ತು ಉಪ ನಿರ್ದೇಶಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಡಿಸೆಂಬರ್ 15,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
No. of posts: 34
Application Start Date: 16 ನವೆಂಬರ್ 2020
Application End Date: 15 ಡಿಸೆಂಬರ್ 2020
Selection Procedure: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ವೃತ್ತಿ ಅನುಭವದ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಹುದ್ದೆಗಳಿಗೆ ಅನುಗುಣವಾಗಿ ಬಿ.ಇ/ಬಿ.ಟೆಕ್, ಸ್ನಾತಕೋತ್ತರ ಪದವಿ, ಸಿಎ ಮತ್ತು ಕಾನೂನು ಪದವಿಯನ್ನು ಮುಗಿಸಿರಬೇಕು. ಜೊತೆಗೆ ವೃತ್ತಿ ಅನುಭವವನ್ನು ಹೊಂದಿರಬೇಕು.
Fee:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 1,500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ನಲ್ಲಿ ಪಾವತಿಸಬೇಕು.
* KVIC ನೌಕರಿದಾರರಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವಿರುವುದಿಲ್ಲ.
Age Limit:
- ನಿರ್ದೇಶಕ ಹುದ್ದೆಗಳಿಗೆ - ಗರಿಷ್ಠ 50 ವರ್ಷಗಳು
- ಉಪ ನಿರ್ದೇಶಕ ಹುದ್ದೆಗಳಿಗೆ - ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ಹಾಗೂ ಪ.ಜಾ/ಪ.ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale:
- ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ - 78,800/-ರೂ
- ಉಪ ನಿರ್ದೇಶಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ- 67,700/-ರೂ ವೇತನ ನೀಡಲಾಗಿದೆ.
- ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ ಬಳಸಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದು.





Comments