ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಖಾಲಿ ಇರುವ ಗ್ರೂಪ್ ಬಿ ವೃಂದದಲ್ಲಿನ ಕನ್ನಡ ಉಪನ್ಯಾಸಕರ (Kannada Lecturers) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 07 ಅಕ್ಟೋಬರ್ 2024 ಹಾಗೂ ದಿನಾಂಕ 07 ನವೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 43100/- ರೂ ಗಳಿಂದ 83900/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments