ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ KSRTC & ಪೊಲೀಸ್ ಹುದ್ದೆಗಳ ನೇಮಕಾತಿ | ಈ ಕುರಿತು ಸವಿವರವಾದ ಮಾಹಿತಿ ನಿಮಗಾಗಿ
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬೀದರ್ ವಿಭಾಗದ ಬೀದರ್-1, ಬೀದರ್-2, ಭಾಲ್ಕಿ, ಔರಾದ್, ಬಸವಕಲ್ಯಾಣ ಮತ್ತು ಹುಮನಾಬಾದ್ ಘಟಕಗಳಲ್ಲಿ ಖಾಲಿ ಇರುವ 100 ಚಾಲಕರು ಮತ್ತು 50 ತಾಂತ್ರಿಕ ಸಹಾಯಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನ ನಡೆಯುವ ದಿನಾಂಕಗಳು :
- ಚಾಲಕ ಹುದ್ದೆಗಳಿಗೆ ಡಿಸೆಂಬರ್ 2 ರಿಂದ 4ರವರೆಗೆ ನಡೆಯಲಿದೆ.
- ತಾಂತ್ರಿಕ ಸಹಾಯಕರು ಹುದ್ದೆಗಳಿಗೆ ಡಿಸೆಂಬರ್ 6 ರಿಂದ 7ರವರೆಗೆ ನಡೆಯಲಿದೆ.
ಸಂದರ್ಶನ ನಡೆಯುವ ಸ್ಥಳ :
ಕ.ಕ.ರ.ಸಾ ನಿಗಮದ ಹಳೆ ಬಸ್ ನಿಲ್ದಾಣದ ಬೀದರ್ ವಿಭಾಗೀಯ ಕಚೇರಿ
ಕಲಬುರಗಿ, ಬೀದರ್, ರಾಯಚೂರು, ಯಾದಗಿರಿ ಜಿಲ್ಲೆಯ ಮಾಜಿ ಸೈನಿಕರಿಗೆ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವನಿಸಲಾಗಿದೆ. ಅರ್ಜಿಗಳನ್ನು ಸ್ವಯಂ ಲಿಖಿತ ರೊಪದಲ್ಲಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/11/2024.
ಅರ್ಜಿ ಸಲ್ಲಿಸುವ ವಿಳಾಸ :
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಲಬುರಗಿ
- ಹೆಚ್ಚಿನ ಮಾಹಿತಿಗೆ: ದೂ.ಸಂ.08472 225003
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.
Comments