Loading..!

LIC ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree PG
Published by: Yallamma G | Date:12 ಮಾರ್ಚ್ 2024
not found

LIC ಎಂಪ್ಲಾಯೀಸ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಉಡುಪಿ ಇಲ್ಲಿ ಖಾಲಿ ಇರುವ3 ಗಣಕಯಂತ್ರ ತಜ್ಞ ಮತ್ತು ಸಹಾಯಕ ಗುಮಾಸ್ತರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31/03/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಂಚೆ ಅಥವಾ ಇತರೆ ಮೂಲಗಳಿಂದ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.  


ಹುದ್ದೆಗಳ ವಿವರ : 3
ಗಣಕಯಂತ್ರ ತಜ್ಞ : 1
ಸಹಾಯಕ ಗುಮಾಸ್ತರು : 2

No. of posts:  3
Application Start Date:  11 ಮಾರ್ಚ್ 2024
Application End Date:  31 ಮಾರ್ಚ್ 2024
Work Location:  ಉಡುಪಿ ಜಿಲ್ಲಾ
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು BE/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾಗಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
- ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.    

Fee: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 1000/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ 500/ -ರೂ. ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 27650-52650 ರೂಗಳವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments