ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಗ್ರೂಪ್ - ಸಿ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನ

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್ - ಸಿ ವೃಂದದಲ್ಲಿ ಖಾಲಿ ಇರುವ 30 (16+14 HK) ಕ್ಲರ್ಕ್ ಕಮ್ ಟೈಪಿಸ್ಟ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 30 ಅಕ್ಟೋಬರ್ 2024 ಹಾಗೂ ಕೊನೆಯ ದಿನಾಂಕ 29 ನವೆಂಬರ್ 2024 ಮಧ್ಯರಾತ್ರಿ 11:59 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪದವಿ ಪೂರ್ವ ಶಿಕ್ಷಣ ಪರೀಕ್ಷೆಯಲ್ಲಿ ಉತ್ತೀರ್ಣ (PUC) ಅಥವಾ ತತ್ಸಮಾನ and ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಪ್ರೌಢ ದರ್ಜೆ ಬೆರಳಚ್ಚು ಪರೀಕ್ಷೆ ಉತ್ತೀರ್ಣ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಪ್ರವರ್ಗ-1 2(ಎ) 2(ಬಿ) 3(ಎ) 3(ಬಿ) ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 250/-
* SC, ST, ಪ್ರವರ್ಗ-1 ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 38 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 41 ವರ್ಷ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 43 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments