ಶಿವಮೊಗ್ಗ ಜಿಲ್ಲೆಯ ಮಲೆನಾಡ ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲೆಯ ಮಲೆನಾಡ ಅಡಿಕೆ ಮಾರಾಟ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಒಟ್ಟು21 ಉಪ ಪ್ರಧಾನ ವ್ಯವಸ್ಥಾಪಕರು, ವ್ಯವಸ್ಥಾಪಕರು, ಹಿರಿಯ ಸಹಾಯಕರು, ಕಿರಿಯ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಭ್ಯರ್ಥಿಗಳು ಖುದ್ದಾಗಿ/ ಅಂಚೆ/ ಕೋರಿಯರ್ ಮೂಲಕ ಅರ್ಜಿ ಸಲ್ಲಿಸಲು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 05 ಆಗಸ್ಟ್ 2024 ಹಾಗೂ ಕೊನೆಯ ದಿನಾಂಕ20 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇರ ನೇಮಕಾತಿ ಸಮಿತಿ, ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಮಲೆನಾಡು ಅಡಿಕೆ ಮಾರಾಟದ ಸಹಕಾರ ಸಂಘ ನಿ., ಶಿವಮೊಗ್ಗ, ಎ.ಪಿ.ಎಂ.ಸಿ ಯಾರ್ಡ್, ಸಾಗರ ರಸ್ತೆ, ಶಿವಮೊಗ್ಗ- 577204 ಈ ವಿಳಾಸಕ್ಕೆ ಕಳುಹಿಸತಕ್ಕದ್ದು.
ಹುದ್ದೆಗಳ ವಿವರ : 21
ಉಪ ಪ್ರಧಾನ ವ್ಯವಸ್ಥಾಪಕರು - 02
ಸಾಫ್ಟ್ ವೇರ್ ಇಂಜಿನಿಯರ್ - 01
ವ್ಯವಸ್ಥಾಪಕರು - 06
ಹಿರಿಯ ಸಹಾಯಕರು - 04
ಕಿರಿಯ ಸಹಾಯಕರು - 07
ವಾಹನ ಚಾಲಕರು - 01
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ SSLC, MBA, BE, B.Tech, Msc, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳು 1.180 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು, ಹಾಗೂ ಇತರೆ ವರ್ಗದ ಅಭ್ಯರ್ಥಿಗಳು 1.100 ರೂ ಅರ್ಜಿ ಶುಲ್ಕವನ್ನು ಪಾವತಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments