ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳ ನೇಮಕಾತಿ

ದಿ ಮಲ್ನಾಡ್ ಸೊಸೈಟ್ ಎಜ್ಯುಕೇಶನ್ ಸೊಸೈಟಿ (ರಿ.) ಹೊನ್ನಾವರದಲ್ಲಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲದಲ್ಲಿ ಖಾಲಿ ಇರುವ ಬೋಧಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/03/2023 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುತ್ ವಿಳಾಸ :
ಅಧ್ಯಕ್ಷರು, ಎಂ.ಪಿ.ಇ. ಸೊಸೈಟಿ, ಪ್ರಭಾತ್ ನಗರ, ಹೊನ್ನಾವರ -581334
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ ಶೇ.55 ಅಂಕಗಳೊಂದಿಗೆ ಪಾಸಾಗಿರಬೇಕು.
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
* ಸಾಮಾನ್ಯ/ OBC ಅಭ್ಯರ್ಥಿಗಳಿಗೆ ರೂ. 2000/- ಹಾಗೂ
* ಪ.ಜಾ. ಪ.ಪಂ. ಮತ್ತು ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ವಯೋಮಿತಿಯನ್ನು ಹೊಂದಿರಬೇಕು.
ಪ.ಜಾ, ಪ.ಪಂ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ಗರಿಷ್ಠ 45 ವರ್ಷ
ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ಗರಿಷ್ಠ 43 ವರ್ಷ ಹಾಗೂ
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಯು.ಜಿ.ಸಿ ನಿಯಮಾನುಸಾರ ವೇತನ ಶ್ರೇಣಿ ನಿಗದಿಪಡಿಸಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments