ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಖಾಲಿ ಇರುವ 1476 ಹುದ್ದೆಗಳಿಗೆ SSLC, PUC ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ & ಉಡುಪಿ ಜಿಲ್ಲೆಗಳಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1476 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆ ಖಾಲಿಯಿರುವ / ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆ ಅಂಗನವಾಡಿ ಕೇಂದ್ರದಿಂದ 3 ಕಿ.ಮೀ. ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
1. ಅರ್ಹ ವಿದ್ಯಾರ್ಹತೆ ಹೊಂದಿದ ಆಸಿಡ್ ದಾಳಿಗೆ ತುತ್ತಾದ ಮಹಿಳೆಯರು, ಅಂಗನವಾಡ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ, ಇತರೆ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ,ಆಸಿಡ್ ದಾಳಿಗೆ ತುತ್ತಾದ ಮಹಿಳೆಯರನ್ನು ಪ್ರಥಮ ಆದ್ಯತೆ ಮೇರೆಗೆ ಆಯ್ಕೆ ಮಾಡಿಕೊಳ್ಳಲಾಗುವುದು.
2. ಇಲಾಖೆಯ ಸುಧಾರಣೆ ಸಂಸ್ಥೆಗಳಲ್ಲಿ ಆಶ್ರಯ ಪಡೆದ ಹಾಲಿ ಮತ್ತು ಮಾಜಿ ನಿವಾಸಿಗಳು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಯ ಪ್ರಕರಣವನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಆಯ್ಕೆ ಮಾಡಲಾಗುವುದು.
3. ಅರ್ಹ ವಿದ್ಯಾರ್ಹತೆ ಹೊಂದಿದ ವಿಧವೆಯರು ಅರ್ಜಿ ಸಲ್ಲಿಸಿದಾಗ ಆಸಿಡ್ ದಾಳಿಗೆ ಒಳಗಾದ ಮಹಿಳೆ ಮತ್ತು ಇಲಾಖಾ ಸುಧಾರಣಾ ಸಂಸ್ಥೆಗಳ ನಿವಾಸಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಸ್ವೀಕೃತ ಅರ್ಜಿಗಳನ್ನು ತಿರಸ್ಕರಿಸಿ, ವಿಧವೆಯರನ್ನೇ ಆಯ್ಕೆ ಮಾಡಲಾಗುವುದು. ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ (ವಿಧವೆಗೆ) ಪ್ರಥಮ ಆದ್ಯತೆ ನೀಡಲಾಗುವುದು.
4. ಅರ್ಹ ವಿದ್ಯಾರ್ಹತೆ ಹೊಂದಿದ ಶೇಕಡಾ 60% ಮೀರದಂತೆ ಅಂಗವಿಕಲತೆ ಹೊಂದಿದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದಾಗ ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2 & 3 ರ ಪ್ರಕರಣಗಳನ್ನು ಹೊರತುಪಡಿಸಿದ, ಸ್ವೀಕೃತವಾಗಿರುವ ಎಲ್ಲಾ ಅರ್ಜಿಗಳನ್ನು ತಿರಸ್ಕರಿಸಿ, ಅಂಗವಿಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಂಗವಿಕಲ ಅಭ್ಯರ್ಥಿಗಳು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವಂತಿಲ್ಲ. ಒಂದುವೇಳೆ ಅರ್ಜಿ ಸಲ್ಲಿಸಿದ್ದಲ್ಲಿ ತಿರಸ್ಕರಿಸಲಾಗುವುದು.
5. ಮೇಲೆ ವಿವರಿಸಿದ ಕ್ರಮ ಸಂಖ್ಯೆ:- 1,2,3 & 4ರ ಪ್ರಕರಣಗಳನ್ನು ಹೊರತುಪಡಿಸಿ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಇಲಾಖೆ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಆಯ್ಕೆ ಮಾಡಲಾಗುವುದು.
- ರಾಯಚೂರು ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024.
- ಮಂಡ್ಯ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/09/2024.
- ದಕ್ಷಿಣ ಕನ್ನಡ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 29/09/2024.
- ರಾಮನಗರ ಜಿಲ್ಲೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಸಹಾಯಕಿಯರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/09/2024.
ಹುದ್ದೆಗಳ ವಿವರ: 1476
ಮಂಡ್ಯ - 341
ದಕ್ಷಿಣ ಕನ್ನಡ - 335
ರಾಯಚೂರು - 391
ರಾಮನಗರ - 216
ಉಡುಪಿ - 193
ಅಂಗನವಾಡಿ ಕಾರ್ಯಕರ್ತೆಯರು : 408
ಅಂಗನವಾಡಿ ಸಹಾಯಕಿಯರು : 1068
* ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
* ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4ನೇ ತರಗತಿ ತೇರ್ಗಡೆಯಾಗಿದ್ದು, ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ. (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ)
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 19 ರಿಂದ ಗರಿಷ್ಠ 35 ವರ್ಷ ವಯೋಮಿತಿಯೊಳಗಿರಬೇಕು.
ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 45 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ :
* ಅಂಗನವಾಡಿ ಕಾರ್ಯಕರ್ತೆ : Rs 10,000/-
* ಅಂಗನವಾಡಿ ಸಹಾಯಕಿ : Rs 5,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments