Loading..!

ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:18 ಜನವರಿ 2023
not found

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಡ್ಯ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ 18 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 14/02/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.


ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸ :
ನಾಗಮಂಗಲ ಪುರಸಭೆಯಲ್ಲಿ ಅಥವಾ ಜಿಲ್ಲಾ ನಾಗರಾಭಿವೃದ್ಧಿಕೋಶ ಕಛೇರಿಯಲ್ಲಿ  ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಮುಖ್ಯಾಧಿಕಾರಿ, ಪುರಸಭೆ, ನಾಗಮಂಗಲ ಕಛೇರಿಗೆ ಸಲ್ಲಿಸುವುದು. 

No. of posts:  18
Application Start Date:  18 ಜನವರಿ 2023
Application End Date:  14 ಫೆಬ್ರುವರಿ 2023
Work Location:  ಮಂಡ್ಯ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ನಾಗಮಂಗಲ ಪುರಸಭೆಯಲ್ಲಿ ಪ್ರಸ್ತುತ ಕಾರ್ಮಿಕರ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ನೇರಪಾವತಿ/ ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ ಲೋಡರ್ ಅಥವಾ ಕ್ಲಿನರ್ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17,000 /- ರಿಂದ 28,950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments