ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 134 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಒಟ್ಟು 134 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 18-01-2024 ಸಂಜೆ 5.30 ಗಂಟೆಯೊಳಗೆ ಅಪ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Administrative Branch,
Mangalore Municipal
Corporation, Mangaluru,
Karnataka.
ಮಂಗಳೂರು ಮಹಾನಗರ ಪಾಲಿಕೆಯಲ್ಲಿ ನೇರ ವೇತನ/ಕಲ್ಯಾಣ/ದಿನಗೂಲಿ ಆಧಾರದ ಮೇಲೆ ಕಳೆದ 2 ವರ್ಷಗಳಿಂದ ನಿರಂತರವಾಗಿ ಕೆಲಸ ಮಾಡುತ್ತಿರುವ ಇತರೆ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಪ್ರಥಮ ಆದ್ಯತೆ ನೀಡಲಾಗುವುದು.
ಅಭ್ಯರ್ಥಿಗಳಿಗೆ ಯಾವುದೇ ಕನಿಷ್ಠ ವಿದ್ಯಾರ್ಹತೆ ನಿಗದಿಪಡಿಸಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು ಜೊತೆಗೆ ಪೌರಕಾರ್ಮಿಕ ಹುದ್ದೆಯಲ್ಲಿ ಕೆಲಸ ಮಾಡುತ್ತಿರುವ ಕ್ಷೇಮಾಭಿವೃದ್ಧಿ, ದಿನಗೂಲಿ, ಗುತ್ತಿಗೆ ಮತ್ತು ಹೊರಗುತ್ತಿಗೆ ಕೆಲಸವನ್ನು ನಿರ್ವಹಿಸುತ್ತಿರಬೇಕು.
ಮಂಗಳೂರು ಮಹಾರನಗರ ಪಾಲಿಕೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 17,000/- ರೂ ಗಳಿಂದ 28,950/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments