ಮಜಗೋನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಮಜಗೋನ್ ಡಾಕ್ ಶಿಪ್ ಬಿಲ್ಡರ್ಸ್ ಲಿಮಿಟೆಡ್ (MDL) ನಲ್ಲಿ ಖಾಲಿ ಇರುವ 531 ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 21-ಆಗಸ್ಟ್-2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 531
ಸ್ಕಿಲ್ಡ್ - 408
ಸೆಮಿ ಸ್ಕಿಲ್ಡ್ - 120
ಸ್ಪೆಷಲ್ ಗ್ರೇಡ್ (ID-VIII) - 02
ಸ್ಪೆಷಲ್ ಗ್ರೇಡ್ (ID-IX) - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ, ವೃತ್ತಿ ಅನುಭವ ಮತ್ತು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕಗಳ ಆದರದ ಮೇಲೆ ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷ ವಯೋಮಿತಿ ಮೀರಿರಬಾರದು .
OBC ಅಭ್ಯರ್ಥಿಗಳು 3 ವರ್ಷ
SC/ ST ಅಭ್ಯರ್ಥಿಗಳು 5 ವರ್ಷ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸ್ಕಿಲ್ಡ್ - 17,000/- ರೂ 64,360/-
ಸೆಮಿ ಸ್ಕಿಲ್ಡ್ - 13,200/- ರೂ 49,910/-
ಸ್ಪೆಷಲ್ ಗ್ರೇಡ್ (ID-VIII) - 21,000/- ರೂ 79,380/-
ಸ್ಪೆಷಲ್ ಗ್ರೇಡ್ (ID-IX) - 22,000/- ರೂ 83,180/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments