ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:22 ಸೆಪ್ಟೆಂಬರ್ 2021

ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಸಮಾಲೋಚಕರ ಹುದ್ದೆಗೆ (Consulting Faculty (Bio Energy and Waste Management)) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 26, 2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಸೂಕ್ತ ವಿವರಗಳನ್ನು ಭರ್ತಿ ಮಾಡಿ, ಕೊನೆಯ ದಿನಾಂಕದೊಳಗಾಗಿ ಈ E-Mail
ವಿಳಾಸಕ್ಕೆ ಕಳುಹಿಸಿ ಕೊಡಬೇಕು.
ಈ ಮೇಲ್ ವಿಳಾಸ : MGIREDBLR@GMAIL.COM
ಅಥವಾ ಕೋರಿಯರ್ / ಸ್ಪೀಡ್ ಪೋಸ್ಟ್ ಮೂಲಕ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ :Mahatma Gandhi Institute of Rural Energy & Development (MGIRED)
Srirampura Cross, Jakkur,
Bengaluru 560 064
Ph : +91-80-23626359 / 23626493
No. of posts: 1
Application Start Date: 22 ಸೆಪ್ಟೆಂಬರ್ 2021
Application End Date: 26 ಸೆಪ್ಟೆಂಬರ್ 2021
Qualification:
ಸಮಾಲೋಚಕ ಸಿಬ್ಬಂದಿ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ವಿದ್ಯಾರ್ಹತೆಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments