ರಾಷ್ಟ್ರೀಯ ಮಿಲಿಟರಿ ಶಾಲೆ ಬೆಂಗಳೂರು ಇಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆಯಲ್ಲಿ ಖಾಲಿ ಇರುವ 02 ಲೋವರ್ ಡಿವಿಷನ್ ಕ್ಲರ್ಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 07 ಅಕ್ಟೋಬರ್ 2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳನ್ನು PUC ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಇಂಗ್ಲಿಷ್ ಟೈಪಿಂಗ್ ಜ್ಞಾನ ಹೊಂದಿರಬೇಕು.
- ಅಭ್ಯರ್ಥಿಗಳು ಕನಿಷ್ಠ - 18 ವರ್ಷಗಳ ವಯೋಮಿತಿಯನ್ನು ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ- 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಮತ್ತು
- ಪ.ಜಾ/ ಪ.ಪಂ ದ ಅಭ್ಯರ್ಥಿಗಳಿಗೆ - 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ - 10 ವಷಗಳ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.
- ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ - 19,900/- ರೂ ದಿಂದ 63,200/- ರೂ ಗಳವರೆಗೆ ವೇತನವನ್ನು ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ಕ ಮಾಡುವ ಮೂಲಕ ಸವಿವರವಾದ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.





Comments