ಭಾರತ ಸರ್ಕಾರ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಗ್ರೂಪ್ ಸಿ ವಿವಿಧ ಹುದ್ದೆಗಳ ನೇಮಕಾತಿ | SSLC /PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತ ಸರ್ಕಾರ, ರಕ್ಷಣಾ ಸಚಿವಾಲಯದಲ್ಲಿ ಖಾಲಿ ಇರುವ ಖಾಲಿ ಇರುವ 113 ಅಕೌಂಟೆಂಟ್, ಸ್ಟೆನೋಗ್ರಾಫ್ರ್ ಗ್ರೇಡ್-I, ಲೋಯರ್ ಡಿವಿಷನ್ ಕ್ಲರ್ಕ್, ಸ್ಟೋರ್ ಕೀಪರ್, ಫೋಟೋಗ್ರಾಫರ್, ಕುಕ್ ಮತ್ತು ಲ್ಯಾಬ್ ಅಟೆಂಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 07 ಜನವರಿ 2025 ಹಾಗೂ ಕೊನೆಯ ದಿನಾಂಕ 06 ಫೆಬ್ರುವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಸ್ಎಸ್ಎಲ್ ಸಿ (10 ನೇ ತರಗತಿ) PUC ಮತ್ತು Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿ 30 ವರ್ಷ ವಯೋಮಿತಿಯನ್ನು ಮೀರಿರಬಾರದು. ವಯೋಮಿತಿ ಸಡಿಲಿಕೆ :
- OBC ಅಭ್ಯರ್ಥಿಗಳಿಗೆ : 3 ವರ್ಷ
- SC, ST, CAT-1 ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ : 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ
ರಕ್ಷಣಾ ಸಚಿವಾಲಯದ ನೇಮಕಾತಿ ಅಧಿಸೂಚನೆಯ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ₹18,000/- 92,300/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments