ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಮೈಸೂರು ಪೇಯಿಂಟ್ಸ್ ಅಂಡ್ ವಾರ್ನಿಷ್ ಲಿಮಿಟೆಡ್, ಮೈಸೂರು ಇಲ್ಲಿ ಖಾಲಿ ಇರುವ ಪ್ರಧಾನ ವ್ಯವಸ್ಥಾಪಕ ಹಾಗು ವ್ಯವಸ್ಥಾಪಕ ಹುದ್ದೆಗಳನ್ನೊಳಗೊಂಡಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 2023 ಫೆಬ್ರುವರಿ 10 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 05
ಪ್ರಧಾನ ವ್ಯವಸ್ಥಾಪಕ (ತಾಂತ್ರಿಕ) - 01
ವ್ಯವಸ್ಥಾಪಕ (ಲೆಕ್ಕಪತ್ರ) - 01
ಉಪ ವ್ಯವಸ್ಥಾಪಕರು (ಇನ್ವೆಂಟರಿ) - 01
ಅಸ್ಸಿಸ್ಟೆಂಟ್ ವರ್ಕ್ ಮ್ಯಾನೇಜರ್ - 01
ಸೀನಿಯರ್ ಕಮಿಸ್ಟ್ - 01
ಅರ್ಜಿ ಸಲ್ಲಿಸುವ ವಿಳಾಸ :
ಮೈಸೂರು ಪೇಯಿಂಟ್ಸ್ ಯಾಂಡ್ ವಾರ್ನಿಷ್ ಲಿ.,
ನೋಂದಾಯಿತ ಕಛೇರಿ, ನ್ಯೂ ಬನ್ನಿಮಂಟಪ ಬಡಾವಣೆ, ಮೈಸೂರು – 570015
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೋಮಾ/ M.Sc/ B.Sc/ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಪಡೆದಿರಬೇಕು.
- ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬೆಸುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದ ಒಳಗಾಗಿ ಅಭ್ಯರ್ಥಿಯು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು ಗರಿಷ್ಠ 38 ವರ್ಷ ವಯೋಮಿತಿಯನ್ನು ಮೀರಬಾರದು.
SC/ST ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ 20,900 /- ರಿಂದ 80,100/- ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments