ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಎನ್ ಜಿಸಿ ಲಿಮಿಟೆಡ್ ನ ಅಂಗಸಂಸ್ಥೆಯಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 50 ಎಲೆಕ್ಟ್ರಿಕಲ್, ಮೆಕ್ಯಾನಿಕಲ್,ಮತ್ತು ಕೆಮಿಸ್ಟ್ರಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 16/06/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ : 50
ಕೆಮಿಕಲ್ - 19
ಎಲೆಕ್ಟ್ರಿಕಲ್ - 5
ಮೆಕ್ಯಾನಿಕಲ್ - 19
ಕೆಮಿಸ್ಟ್ರಿ - 1
ಡ್ರಾಫ್ಟ್ಸ್ ಮನ್ - 1
ಸೆಕ್ರೆಟರಿ - 5
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ Deplom/ B.Sc ಪದವಿ/ ಸ್ನಾತಕೋತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು
ಸಾಮಾನ್ಯ/OBC (NCL)/EWS ಅಭ್ಯರ್ಥಿಗಳು: ರೂ.118/-
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ
ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸತಕ್ಕದ್ದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PwBD ಅಭ್ಯರ್ಥಿಗಳು: 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25,000/- ರಿಂದ 86,400/- ರೂ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments