ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:1 ಫೆಬ್ರುವರಿ 2024

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದಡಿ ಕಾರ್ಯನಿರ್ವಹಿಸುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಸ್ಥಾಪಿಸಲಾಗಿರುವ ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 11 ಮಾರ್ಕೆಟಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24/02/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
No. of posts: 11
Application Start Date: 1 ಫೆಬ್ರುವರಿ 2024
Application End Date: 24 ಫೆಬ್ರುವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ ಸಂಸ್ಥೆಯಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 118/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC / ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. OBC ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree





Comments