ಮೈಸೂರು ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಮೈಸೂರು ನ್ಯಾಯಾಲಯದಲ್ಲಿ ಖಾಲಿ ಇರುವ ಬೆರಚ್ಚುಗಾರರು(Typist), ಪ್ಯೂನ್ ಹುದ್ದೆಗಳನ್ನು ಒಳಗೊಂಡಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04 ಜುಲೈ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 59
ಪ್ಯೂನ್ - 45
ಬೆರಳಚ್ಚುಗಾರ - 3
ಸ್ಟೆನೋಗ್ರಾಫರ್ ಗ್ರೇಡ್-III - 11
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007 ಮತ್ತು 2021ರ ಅನ್ವಯ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC / ಡಿಪ್ಲೊಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯವರು ನಡೆಸುವ ಕನ್ನಡ ಮತ್ತು ಆಂಗ್ಲ ಹಿರಿಯ ಶ್ರೇಣಿ ಬೆರಳಚ್ಚು (Typewriting Senior) ಅಥವಾ ಡಿಪ್ಲೊಮೊ ಕಮರ್ಷಿಯಲ್ ಪ್ರಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
* ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಸಾಮಾನ್ಯ ಅಭ್ಯರ್ಥಿಗಳು 300/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು ಹಾಗೂ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ದೈಹಿಕ ಅಂಗವಿಕಲತೆ ಹೊಂದಿರುವ ಅಭ್ಯರ್ಥಿಗಳು 150/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.





Comments