ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ಮೈಸೂರು ಜಿಲ್ಲಾ ಪಂಚಾಯತ್ ನಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ 36 ತಾಂತ್ರಿಕ ಸಹಾಯಕ ಅಭಿಯಂತಕರು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು ಮತ್ತು ಆಡಳಿತ ಸಹಾಯಕರು ಸೇರಿದಂತೆ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ2022 ಡಿಸೇಂಬರ್ 30 ರಂದು ಅಥವಾ ಅದಕ್ಕೂ ಮುಂಚಿತವಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 36
ತಾಂತ್ರಿಕ ಸಹಾಯಕ
ಭಿಯಂತಕರು - 04
ಐಇಸಿ (ಮಾಹಿತಿ ಶಿಕ್ಷಣ ಸಂವಹನ) - 01
ತಾಂತ್ರಿಕ ಸಂಯೋಜಕರು - 02
ತಾಂತ್ರಿಕ ಸಹಾಯಕರು (ಕೃಷಿ ಇಲಾಖೆ) - 04
ತಾಂತ್ರಿಕ ಸಹಾಯಕರು (ತೋಟಗಾರಿಕೆ) - 10
ತಾಂತ್ರಿಕ ಸಹಾಯಕರು (ರೇಷ್ಮೆ, ಕೃಷಿ) - 01
ತಾಂತ್ರಿಕ ಸಹಾಯಕರು (ಅರಣ್ಯ) - 06
ಆಡಳಿತ ಸಹಾಯಕ - 08
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ 1:3 ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನಂತರ ಸಂದರ್ಶಸದ ಮೂಲಕ ಈ ಎಲ್ಲ ಹುದ್ದೆಗಳಿಗೆ ಆಯ್ಕೆಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE/ BSc/ B.Com ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯಸ್ಸು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ಮೈಸೂರು ಜಿಲ್ಲಾ ಪಂಚಾಯತಿ ನಿಯಮಾನುಸಾರವಾಗಿ ವಯೋಮಿತಿ ಸಡಿಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 17,600/- ರೂ ರಿಂದ 29,000/- ರೂ ಗಳ ವರೆಗೆ ಇರಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments