ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ಗಳಲ್ಲಿ ಖಾಲಿ "ಗ್ರಾಮ ಕಾಯಕ ಮಿತ್ರ" ಇರುವ ಹುದ್ದೆಗಳ ನೇಮಕಕ್ಕೆ SSLC ಪಾಸಾದವರಿಂದ ಅರ್ಜಿ ಆಹ್ವಾನ
Published by: Basavaraj Halli | Date:6 ಎಪ್ರಿಲ್ 2021

ಮಹಾತ್ಮಗಾಂಧಿ ನರೇಗಾ ಯೋಜನಡೆಯಡಿ ಮೈಸೂರು ಜಿಲ್ಲೆಯ ಒಟ್ಟು 57 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 57 'ಗ್ರಾಮ ಕಾಯಕ ಮಿತ್ರ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಮ ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಏಪ್ರಿಲ್ 15, 2021ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಆಸಕ್ತ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ನಿಗದಿಪಡಿಸಿದ ಕೊನೆಯ ದಿನಾಂಕಏಪ್ರಿಲ್ 15, 2021ರ ಸಂಜೆ 5:00 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- 'ಗ್ರಾಮ ಕಾಯಕ ಮಿತ್ರ' ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸತಕ್ಕದ್ದು.
- ಹೆಚ್ಚಿನ ವಿವರಗಳಿಗಾಗಿ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
No. of posts: 57
Application Start Date: 6 ಎಪ್ರಿಲ್ 2021
Application End Date: 15 ಎಪ್ರಿಲ್ 2021
Work Location: ಮೈಸೂರು, ಕರ್ನಾಟಕ
Qualification: - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು.
Age Limit:
- ದಿನಾಂಕ ಜನವರಿ 1, 2021ರ ಅನ್ವಯ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 6,000 ರೂಪಾಯಿ ಗೌರವ ಧನ ನೀಡಲಾಗುವದು.
- - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- - ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments