ನಬಾರ್ಡ್ ಬ್ಯಾಂಕ್ ದಿಂದ ಒಟ್ಟು 177 ಡೆವಲಪ್ ಮೆಂಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಬ್ಯಾಂಕ್ ಫಾರ್ ಅಗ್ರಿಕಲ್ಚರ್ ಅಂಡ್ ರೂರಲ್ ಡೆವಲಪ್ಮೆಂಟ್ (ನಬಾರ್ಡ್)ದಲ್ಲಿನ ಡೆವಲಪ್ ಮೆಂಟ್ ಅಸಿಸ್ಟೆಂಟ್ ಒಟ್ಟು 177 ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ದಿನಾಂಕ 15 ಸೆಪ್ಟೆಂಬರ್ 2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 10 ಅಕ್ಟೊಬರ್ 2022ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 450/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 50/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ 5 ವರ್ಷಗಳು ಹಾಗೂ
- ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆಯನ್ನು ನೀಡಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments