ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ನಲ್ಲಿ ಖಾಲಿ ಇರುವ ಒಟ್ಟು ಅಸಿಸ್ಟೆಂಟ್ ಮ್ಯಾನೇಜರ್ (ಗ್ರೇಡ್ - A) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈಗ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 15 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27 ಜುಲೈ 2024 ಹಾಗೂ ಕೊನೆಯ ದಿನಾಂಕ 15 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು BBA/ BMS/ BE/ B.Tech/ BSC ಪದವಿ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 800/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ 150/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments