ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 10-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು, ಈಗ ಮತ್ತೆ 7 ದಿನಗಳ ಕಾಲ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 17-11-2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ200/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
SC/ST/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 21,500/- ರಿಂದ 67,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments