ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Mallappa Myageri | Date:12 ನವೆಂಬರ್ 2021

ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 183 ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 10-11-2021ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು, ಈಗ ಮತ್ತೆ 7 ದಿನಗಳ ಕಾಲ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿರುತ್ತದೆ. ಆದ್ದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ : 17-11-2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 183
Application Start Date: 21 ಅಕ್ಟೋಬರ್ 2021
Application End Date: 17 ನವೆಂಬರ್ 2021
Selection Procedure: ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ಆನ್‌ಲೈನ್ ಪರೀಕ್ಷೆ ಮತ್ತು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಮೆಟ್ರಿಕ್, ಡಿಪ್ಲೋಮಾ, ಐಟಿಐ ಮತ್ತು ಬಿ.ಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ200/- ಅರ್ಜಿ ಶುಲ್ಕವನ್ನು ನಿಗದಿಪಡಿಸಿದೆ.
SC/ST/ಅಂಗವಿಕಲ/ಮಾಜಿಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯತಿಯನ್ನು ನೀಡಲಾಗಿದೆ.
Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ, SC/ST ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: All Over India, KA,





Comments