ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ 74 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ರಸಗೊಬ್ಬರ ನಿಯಮಿತದಲ್ಲಿ ಖಾಲಿ ಇರುವ 74 ಮಾರ್ಕೆಟಿಂಗ್ ಮ್ಯಾನೇಜ್ ಮೆಂಟ್ ಟ್ರೇನಿ, ಫೈನಾನ್ಸ್ ಅಂಡ್ ಅಕೌಂಟೆಂಟ್ ಮ್ಯಾನೇಜ್ ಮೆಂಟ್ ಟ್ರೇನಿ, ಮತ್ತು ಲಾ ಮ್ಯಾನೇಜ್ ಮೆಂಟ್ ಟ್ರೇನಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01-ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 74
ಮಾರ್ಕೆಟಿಂಗ್ ಮ್ಯಾನೇಜ್ ಮೆಂಟ್ ಟ್ರೇನಿ - 60
ಫೈನಾನ್ಸ್ ಅಂಡ್ ಅಕೌಂಟೆಂಟ್ ಮ್ಯಾನೇಜ್ ಮೆಂಟ್ ಟ್ರೇನಿ - 10
ಲಾ ಮ್ಯಾನೇಜ್ ಮೆಂಟ್ ಟ್ರೇನಿ - 04
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸಿ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ LLB/ CA/ MBA/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 700/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ ST ಮಾಜಿ ಸೈನಿಕರು/ PwBD/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ40.000/- ರೂಗಳಿಂದ 1.40.000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments