ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನl ಕೂಡಲೇ ಅರ್ಜಿ ಸಲ್ಲಿಸಿ

ಭಾರತೀಯ ನೌಕಾಪಡೆಯ ವಿವಿಧ ಟ್ರೇಡಗಳಲ್ಲಿ ಒಂದಾದ ಮುಂಬೈ ನ ನೇವಲ್ ಡಾಕ್ ಯಾರ್ಡನಲ್ಲಿ ಖಾಲಿ ಇರುವ301 ಫಿಟ್ಟರ್, ಕಾರ್ಪೆOಟರ್, ಪೇಂಟರ್, ಮೆಕ್ಯಾನಿಕ್, ಫೌಂಡ್ರಿ ಮ್ಯಾನ್, ಪ್ಯಾಟರ್ನ್ ಮೇಕರ್, ಶೀಟ್ ಮೆಟಲ್ ವರ್ಕರ್, ಟೈಲರ್ ಮತ್ತು ಎಲೆಕ್ಟ್ರಾನಿಕ್ ಮೆಕ್ಯಾನಿಕಲ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು10 ಮೇ 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿSSLC/ PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 14 ವರ್ಷ ಹಾಗೂ 2006 ಕ್ಕಿಂತ ಮುಂಚಿತವಾಗಿ ಜನಿಸಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments