ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನ ನ್ಯಾಷನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಾರ್ಮ್ಯಾಟಿಕ್ಸ್ ಅಂಡ್ ರಿಸರ್ಚ್ ಇಲ್ಲಿ ಖಾಲಿ ಇರುವ ಒಟ್ಟು 07 ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ – II (ವೈದ್ಯಕೀಯ), ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ – I (ವೈದ್ಯಕೀಯ), ಮತ್ತು ಯೋಜನೆಯ ತಾಂತ್ರಿಕ ಬೆಂಬಲ – III ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 28 ಫೆಬ್ರುವರಿ 2024 ರಂದು ಬೆಳಿಗ್ಗೆ 09:00 ಗಂಟೆಗೆ ನಡೆಯಲಿರುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 07
ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ – II (ವೈದ್ಯಕೀಯ) - 02
ಪ್ರಾಜೆಕ್ಟ್ ರಿಸರ್ಚ್ ಸೈಂಟಿಸ್ಟ್ – I (ವೈದ್ಯಕೀಯ) - 01
ಯೋಜನೆಯ ತಾಂತ್ರಿಕ ಬೆಂಬಲ – III - 03
ಪ್ರಾಜೆಕ್ಟ್ ಟೆಕ್ನಿಕಲ್ ಸಪೋರ್ಟ್-III (ಪ್ರೋಗ್ರಾಮರ್) - 01
ಸಂದರ್ಶನ ನಡೆಯುವ ಸ್ಥಳ :
ICMR-NCDIR,
Nirmal Bhawan, ICMR Complex,
(II Floor), Poojanahalli Kannamangala
Post, Bengaluru-562110
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳುMBBS,/ MD, MS, DNB, Ph.D / BE / B.Tech ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ವಯಸ್ಸು 35 ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 35,560/- ರು ಗಳಿಂದ 1,01,600/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments