ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ l ಕೂಡಲೇ ಅರ್ಜಿ ಸಲ್ಲಿಸಿ

ರಾಷ್ಟ್ರಿಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯಲ್ಲಿ ಖಾಲಿ ಇರುವ 123 ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್. ಮತ್ತುಅಸಿಸ್ಟೆಂಟ್ ಪ್ರೊಫೆಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ27 ಜಲೈ 2024 ಹಾಗೂ ಕೊನೆಯ ದಿನಾಂಕ 16 ಆಗಸ್ಟ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 123
ಪ್ರೊಫೆಸರ್ - 33
ಅಸೋಸಿಯೇಟ್ ಪ್ರೊಫೆಸರ್ - 58
ಅಸಿಸ್ಟೆಂಟ್ ಪ್ರೊಫೆಸರ್ - 32
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PG/Ph.D ಪದವಿಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 1000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ ST/PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments