ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕೋಲ್ ಫೀಲ್ಡ್ಸ್ ಲಿಮಿಟೆಡ್ (NCL)ನಲ್ಲಿ ಖಾಲಿ ಇರುವ 150 ಅಸಿಸ್ಟೆಂಟ್ ಫೋರ್‌ಮನ್ ಗ್ರೇಡ್-ಸಿ, ಸಹಾಯಕ ಫೋರ್‌ಮನ್ (ಮೆಕ್ಯಾನಿಕಲ್) ಮತ್ತು ಸಹಾಯಕ ಫೋರ್‌ಮನ್ (ಎಲೆಕ್ಟ್ರಿಕಲ್) ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05/02/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 150
Assistant Foreman (E&T) (Trainee) Grade-C - 09
Assistant Foreman(Mechanical) (Trainee) Grade-C - 59
Assistant Foreman(Electrical) (Trainee) Grade-C - 82
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC / Diploma ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ OBC/ EWS ಅಭ್ಯರ್ಥಿಗಳು 1180/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ ST/ ESM / PWD ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
SC/ ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments