ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ (NCLT)ನಲ್ಲಿ ಖಾಲಿ ಇರುವ 98 ಕೋರ್ಟ್ ಆಫೀಸರ್, ಪ್ರೈವೇಟ್ ಸೆಕ್ರೆಟರಿಸ್, ಸೀನಿಯರ್ ಲೀಗಲ್ ಅಸಿಸ್ಟೆಂಟ್, ಅಸಿಸ್ಟೆಂಟ್, ರೆಕಾರ್ಡ್ ಅಸಿಸ್ಟೆಂಟ್ ಮತ್ತು ಸ್ಟಾಫ್ ಕಾರ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅಪ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 23 ನವೆಂಬರ್ 2024.ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 98
Court Officer :- 17
Private Secretary :- 26
Senior Legal Assistant :- 23
Assistant :- 14
Stenographer Grade-II/PA :- 7
Cashier :- 1
Record Assistant :- 9
Staff Car Driver :- 1
ಅರ್ಜಿ ಸಲ್ಲಿಸುವ ವಿಳಾಸ :
Secretary, NCLT, National Company Law Tribunal, 6th Floor, Block No. 3, C.G.O. Complex, Lodhi Road, New Delhi-110003
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 10th, LLB ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 56 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 19,900/- ರೂ ಗಳಿಂದ 151100/- ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments