Loading..!

ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Savita Halli | Date:17 ಆಗಸ್ಟ್ 2022
not found
ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ (ನ್ಯಾಷನಲ್ ಹೈವೇಸ್ ಅಥಾರಿಟಿ ಆಫ್ ಇಂಡಿಯಾ- NHAI )ದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ30 ಯಂಗ್ ಪ್ರೊಫೆಷನಲ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 09/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
No. of posts:  30
Application Start Date:  17 ಆಗಸ್ಟ್ 2022
Application End Date:  9 ಸೆಪ್ಟೆಂಬರ್ 2022
Work Location:  ಭಾರತದಾಧ್ಯಂತ
Selection Procedure:

ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕ್ಲಾಟ್ ಪರೀಕ್ಷೆಯ ಅಂಕ ಮತ್ತು ಇತರ ಶೈಕ್ಷಣಿಕ ಅಂಕಗಳನ್ನು ಆಧರಿಸಿ ಅರ್ಹ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿ ಆಯ್ಕೆ ಮಾಡಿಕೊಳ್ಳಲಾಗುವುದು.  

Qualification:

* ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ಕಾನೂನು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮತ್ತು ಕಾಮನ್ ಲಾ ಅಡ್ಮಿಶನ್ ಟೆಸ್ಟ್ ( ಕ್ಲಾಟ್ ) ನಲ್ಲಿ ತೇರ್ಗಡೆಯಾಗಿರಬೇಕು.
* ವೃತ್ತಿಯಲ್ಲಿ ಅನುಭವ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

Age Limit:

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಯ ವಯಸ್ಸು 32 ವರ್ಷ ಮೀರಿರಬಾರದು. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 60,000 /-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments