ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 10 ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್, ನ್ಯಾಷನಲ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 14/12/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 10
ಮ್ಯಾನೇಜರ್ - 05
ಡೆಪ್ಯುಟಿ ಮ್ಯಾನೇಜರ್ - 02
ನ್ಯಾಷನಲ್ ಮ್ಯಾನೇಜರ್ - 03
ಅರ್ಜಿ ಸಲ್ಲಿಸುವ ವಿಳಾಸ
DGM (HR & Admn)-I National Highways Authority of India Plot No.G5-&6,
Sector-10, Dwarka, New Delhi-110075
- ವಿಶೇಷ ಸೂಚನೆ: ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://nhai.gov.in/ ಗೆ ಭೇಟಿ ನೀಡಿ ನೇಮಕಾತಿ ನಿಯಮಾನುಸಾರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ 14/12/2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಡೆಪ್ಯುಟೇಶನ್ ಮತ್ತು ದಾಖಲೆ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಇಂಜಿನಿಯರಿಂಗ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.9,300/- ರಿಂದ 39,100/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments