ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ದಲ್ಲಿ ಖಾಲಿ ಇರುವ 55 ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 02 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 55
ಜನರಲ್ ಮ್ಯಾನೇಜರ್ - 30
ಡೆಪ್ಯುಟಿ ಜನರಲ್ ಮ್ಯಾನೇಜರ್ - 25
ಅರ್ಜಿ ಹಾರ್ಡ್ ಕಾಪಿ ಕಲಿಸುವ ವಿಳಾಸ :
Dy. General Manager (HR & Admn)-III, National Highways Authority of India, Plot No.G-5&6, Sector-10, Dwarka, New Delhi-110075
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಟ 56 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಒಳಗೊಂಡಿರಬೇಕು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 78,800/- ರೂ ಗಳಿಂದ 2,15,900/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments