ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ 43 ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಚಿಪ್ ಎಕಾನಾಮಿಸ್ಟ್, ಮತ್ತು ಅಪ್ಲಿಕೇಶನ್ ಡೆವಲಪರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18-ಅಕ್ಟೋಬರ್-2023 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 43
ಜನರಲ್ ಮ್ಯಾನೇಜರ್ - 01
ಡೆಪ್ಯುಟಿ ಜನರಲ್ ಮ್ಯಾನೇಜರ್ - 01
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ - 01
ಡೆಪ್ಯುಟಿ ಮ್ಯಾನೇಜರ್ (ಎಕಾನಾಮಿಸ್ಟ್) - 01
ಡೆಪ್ಯುಟಿ ಮ್ಯಾನೇಜರ್ (MIS) - 01
ಅಸಿಸ್ಟೆಂಟ್ ಮ್ಯಾನೇಜರ್ (ಜೆನೆರಾಲಿಸ್ಟ್) - 16
ಅಸಿಸ್ಟೆಂಟ್ ಮ್ಯಾನೇಜರ್ (ಹಿಂದಿ) - 01
ಚಿಪ್ ಎಕಾನಾಮಿಸ್ಟ್ - 01
ಸೀನಿಯರ್ ಅಪ್ಲಿಕೇಶನ್ ಡೆವಲಪರ್ - 01
ಅಪ್ಲಿಕೇಶನ್ ಡೆವಲಪರ್ - 02
ಸೀನಿಯರ್ ಪ್ರೊಜೆಕ್ಟ ಫೈನಾನ್ಸ್ ಆಫೀಸರ್ - 07
ಪ್ರಾಜೆಕ್ಟ್ ಫೈನಾನ್ಸ್ ಆಫೀಸರ್ - 08
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಅರ್ಹತೆ, ಅನುಭವ, ಲಿಖಿತ ಪರೀಕ್ಷೆ ಮತ್ತು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ/ B.E./B.Tech./ MCA/MTech / B.Sc. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD ಅಭ್ಯರ್ಥಿಗಳು ರೂ.175/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 62 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
- ಪ.ಜಾ/ ಪ.ಪಂ ದ ಅಭ್ಯರ್ಥಿಗಳಿಗೆ - 5 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ - 10 ವಷಗಳ ವಯೋಮಿತಿಯಲ್ಲಿ ಸಡಲಿಕೆ ನೀಡಲಾಗುವುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments