ರಾಷ್ಟ್ರೀಯ ವಸತಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ರಾಷ್ಟ್ರೀಯ ವಸತಿ ಬ್ಯಾಂಕ್ (ನ್ಯಾಷನಲ್ ಹೌಸಿಂಗ್ ಬ್ಯಾಂಕ್) ನಲ್ಲಿ ಖಾಲಿ ಇರುವ 48 ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್), ಸಹಾಯಕ ಜನರಲ್ ಮ್ಯಾನೇಜರ್ (ಕ್ರೆಡಿಟ್), ಉಪ ವ್ಯವಸ್ಥಾಪಕರು (ಕ್ರೆಡಿಟ್), ಅಪ್ಲಿಕೇಶನ್ ಡೆವಲಪರ್, ಯೋಜನೆಯ ಹಣಕಾಸು ಅಧಿಕಾರಿ ಮತ್ತು ಸಹಾಯಕ ವ್ಯವಸ್ಥಾಪಕರು (ಸಾಮಾನ್ಯರು) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 19 ಜುಲೈ 2024 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 48
ಜನರಲ್ ಮ್ಯಾನೇಜರ್ (ಪ್ರಾಜೆಕ್ಟ್ ಫೈನಾನ್ಸ್) - 1
ಸಹಾಯಕ ಜನರಲ್ ಮ್ಯಾನೇಜರ್ (ಕ್ರೆಡಿಟ್) - 1
ಉಪ ವ್ಯವಸ್ಥಾಪಕರು (ಕ್ರೆಡಿಟ್) - 3
ಸಹಾಯಕ ವ್ಯವಸ್ಥಾಪಕರು (ಸಾಮಾನ್ಯರು) - 18
ಮುಖ್ಯ ಅರ್ಥಶಾಸ್ತ್ರಜ್ಞ -1
ಅಪ್ಲಿಕೇಶನ್ ಡೆವಲಪರ್ - 1
ಹಿರಿಯ ಯೋಜನಾ ಹಣಕಾಸು ಅಧಿಕಾರಿ - 10
ಯೋಜನೆಯ ಹಣಕಾಸು ಅಧಿಕಾರಿ - 12
ಪ್ರೋಟೋಕಾಲ್ ಅಧಿಕಾರಿ (ದೆಹಲಿ) - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 850/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD ಅಭ್ಯರ್ಥಿಗಳು ರೂ.175/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments