ಬಳ್ಳಾರಿ ಜಿಲ್ಲಾ ಆರೋಗ್ಯಾ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ 48 ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್ (RBSK), ಲ್ಯಾಬೋರೇಟರಿ ಟೆಚ್ನಿಷಿಯನ್, ಜೂನಿಯರ್ ಹೆಲ್ತ್ ಅಸಿಸ್ಟೆಂಟ್, ಸ್ಟಾಫ್ ನರ್ಸ್ (NHM/NUHM) ಮತ್ತು ಆಡಿಯೊಮೆಟ್ರಿಕ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಂ ಮೆರಿಟ್ ಆಧಾರದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ13 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 48
ಮೆಡಿಕಲ್ ಆಫೀಸರ್ - 8
ಮೆಡಿಕಲ್ ಆಫೀಸರ್ (RBSK) - 6
ನರ್ಸಿಂಗ್ ಆಫೀಸರ್ - 3
ಸ್ಟಾಫ್ ನರ್ಸ್ - 8
ಲ್ಯಾಬೋರೇಟರಿ ಟೆಚ್ನಿಷಿಯನ್ - 8
ಜೂನಿಯರ್ ಹೆಲ್ತ್ ಅಸಿಸ್ಟೆಂಟ್ - 8
ಸ್ಟಾಫ್ ನರ್ಸ್ (NHM/NUHM) - 5
ಆಡಿಯೊಮೆಟ್ರಿಕ್ ಅಸಿಸ್ಟೆಂಟ್ - 1
ಇನ್ಸ್ಟ್ರಕ್ಟರ್ - 1
ಸಂದರ್ಶನದ ವಿಳಾಸ:
Office Hall of District Health & Family Welfare Officers, Ballari, Karnataka
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC / ಡಿಪ್ಲೊಮಾ/ ಬಿಎಎಂಎಸ್ / B.Sc, M.Sc / GNM ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು 35 ರಿಂದ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 14,044/- ರೂ ಗಳಿಂದ 46,894/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments