ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ತುಮಕೂರು ಜಿಲ್ಲೆಯಲ್ಲಿ ಖಾಲಿ ಇರುವ 15 ತಜ್ಞವೈದ್ಯರು ಹಾಗೂ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಆಸಕ್ತ ಅಭ್ಯರ್ಥಿಗಳು ದಿನಾಂಕ 27-06-2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಯೋಜನಾ ನಿರ್ವಹಣಾಧಿಕಾರಿಗಳ ಘಟಕ,
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿಗಳ ಸಂಕೀರ್ಣ,
ಅಮಾನಿಕೆರೆ ಮುಂಭಾಗ, ತುಮಕೂರು.
ಹುದ್ದೆಗಳ ವಿವರ : 15
ಪ್ರಯೋಗ ಶಾಲಾ ತಂತ್ರಜ್ಞರು - 01
District Hospital Quality Manager(DHQM) 01
ಮಕ್ಕಳ ತಜ್ಞರು - 01
ಮಕ್ಕಳ ಆರೋಗ್ಯ ಸಮಾಲೋಚಕರು - 01
ಫಾರ್ಮಸಿ ಅಧಿಕಾರಿಗಳು - 01
ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು - 02
ಆರೋಗ್ಯ ನಿರೀಕ್ಷಾಧಿಕಾರಿಗಳು - 02
ಶುಶೃಷಣಾದಿಕಾರಿಗಳು - 01
ಫಿಜಿಯೋಥೆರಪಿಸ್ಟ - 01
ಆಡಿಯಾಲಜಿಸ್ಟ್ /ಸ್ಪೀಚ್ ಥೆರಪಿಸ್ಟ್ - 01
ಕ್ಲಿನಿಕಲ್ ಸೈಕಾಲಜಿಸ್ಟ್ - 01
ಅಪ್ರೋಮೆಟ್ರಿಸ್ಟ್ - 01
ಮನೋವೈದ್ಯರು - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದಲ್ಲಿ, ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ B.Sc/ SSLC/ PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳಿಗೆ ಮೊದಲ ಆಧ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 45 ವರ್ಷ ಮತ್ತು ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಬಾರದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 11,500 /- ರೂ ಗಳಿಂದ 1,10,000 /- ರೂ ಗಳವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments