ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿ

ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ತಜ್ಞವೈದ್ಯರು ಹಾಗೂ ವೈದ್ಯಾಧಿಕಾರಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 3 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 26
ಸ್ತ್ರೀ ರೋಗ ತಜ್ಞರು - 10
ಮಕ್ಕಳ ತಜ್ಞರು - 6
ಅರವಳಿಕೆ ತಜ್ಞರು - 4
ಜನರಲ್ ಸರ್ಜನ್ - 2
ಜನರಲ್ ಮೆಡಿಸಿನ್ - 2
ಚರ್ಮರೋಗ ತಜ್ಞರು - 1
ಎಲುಬು ಮತ್ತು ಕೀಲು ತಜ್ಞರು - 1
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರವಾಗಿ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನ 50,000 /- ರೂ ಗಳಿಂದ 1,00,000 /- ರೂ ಗಳ ವರೆಗೆ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments