ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 57 ಎಲೆಕ್ಟ್ರಿಷಿಯನ್, ಫಿಟ್ಟರ್, ಪ್ಲಂಬರ, ಕಂಪ್ಯೂಟರ್ ಆಪರೇಟರ್, ಸಿವಿಲ್, ಎಲೆಕ್ಟ್ರಿಕಲ್, ನರ್ಸ್ ಮತ್ತು ಹೋಟೆಲ್ ಮ್ಯಾನೇಜ್ಮೆಂಟ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 30 ಏಪ್ರಿಲ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Deputy General Manager (HR),
Parbati-II HE Project, Nagwain,
Distt.- Mandi, Himachal Pradesh,
Pin- 175121.
ಹುದ್ದೆಗಳ ವಿವರ : 57
ಐಟಿಐ ಅಪ್ರೆಂಟಿಸ್ ಶಿಪ್ - 39
ಡಿಪ್ಲೋಮ ಅಪ್ರೆಂಟಿಸ್ ಶಿಪ್ - 13
ಗ್ರಾಜ್ಯುಯೇಟ್ ಅಪ್ರೆಂಟಿಸ್ ಶಿಪ್ - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ITI / Diplomaವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments