ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಹೈಡ್ರೋ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ (NHPC)ನಲ್ಲಿ ಖಾಲಿ ಇರುವ 118 ಟ್ರೈನಿ ಅಧಿಕಾರಿ, ಹಿರಿಯ ವೈದ್ಯಕೀಯ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಗೇಟ್ ಅಂಕಗಳು, ಗುಂಪು ಚರ್ಚೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 30 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 118
Trainee Officer (HR) - 71
Trainee Officer (PR) - 10
Trainee Officer (Law) - 12
Senior Medical Officer - 25
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು LLB, MSW, MBA, MBBS ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ UR/EWS/OBC (NCL) ಅಭ್ಯರ್ಥಿಗಳು 708/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಅರ್ಜಿಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯೋಮಿತಿಯನ್ನು ಪೊರೈಸಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷಗಳು
SC/ST ಅಭ್ಯರ್ಥಿಗಳಿಗೆ: 05 ವರ್ಷಗಳು
PwBD (ಸಾಮಾನ್ಯ) ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 50,000/- ರೂ ಗಳಿಂದ 1,80,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments