ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ.

ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯಲ್ಲಿ ಖಾಲಿ ಇರುವ 67 ಸಹಾಯಕ ಸಬ್-ಇನ್ಸ್‌ಪೆಕ್ಟರ್ (ASI) ಮತ್ತು ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಭಾರತದೆಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 07/04/2022 ರೊಳಗೆ ಅಂಚೆಯ ಮುಕಾಂತರ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಒಟ್ಟು ಹುದ್ದೆಗಳ ವಿವರ : 67
ಅರ್ಜಿ ಸಲ್ಲಿಸಲು ಕಚೇರಿ ವಿಳಾಸ:
"SP(Adm), NIA HQ, Opposite CGO complex, Lodhi Road, New Delhi 110003"
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು, ತದನಂತರ ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
* ಸಹಾಯಕ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಂಗೀಕೃತ ವಿಶ್ವವಿದಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
* ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು PUC ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
- ಸಹಾಯಕ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 5 ನೇ ವೇತನ. ಮತ್ತು
- ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 4 ನೇ ವೇತನದ ಅನುಸಾರ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments