ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕಂಪನಿ ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 500 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಮಾ ಕಂಪನಿಯಾದ ದಿ ನ್ಯೂ ಇಂಡಿಯಾ ಅಶ್ಯುರೆನ್ಸ್ ಕೊ.ಲಿಮಿಡೆಟ್ (NIACL)ನಲ್ಲಿ ಖಾಲಿ ಇರುವ 500 ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 17 ಡಿಸೆಂಬರ್ 2024 ಹಾಗೂ ಕೊನೆಯ ದಿನಾಂಕ 01 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಯಾವುದೇ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ಹಾಗು ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 40,000/- ರು ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments