ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ 500 ಕ್ಕೂ ಅಧಿಕ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ.

ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ ಖಾಲಿ ಇರುವ ಒಟ್ಟು598 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 04/04/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸ ಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 598
- Scientist-‘B’ : 71
- Scientific Officer/Engineer : 196
- Scientific/Technical Assistant : 331
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಟ 21 ವರ್ಷ ವಯಸ್ಸು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
OBC ಅಭ್ಯರ್ಥಿಗಳಿಗೆ 38 ವರ್ಷ
SC/ST ಅಭ್ಯರ್ಥಿಗಳಿಗೆ 40 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವೇತನವನ್ನು ನಿಗದಿ ಪಡಿಸಲಾಗಿದೆ.
- Scientist-‘B’ : 56100-177500/-
- Scientific Officer/Engineer : . 44900-142400/-
- Scientific/Technical Assistant : 35400-112400/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments